Tuesday 21 March 2017

A old lady starts receiving money and was surprised.

ಮನೆಗೆ ಹೊರಟಿದ್ದೆ ಎಲೆಕ್ರ್ಟಿಕ್ ಕಂಬಕ್ಕೆ ಯಾರೋ ಒಂದು ಬೋರ್ಡ್ ನೇತು ಹಾಕಿದ್ದರು. ಅದರಲ್ಲಿ ಏನು ಬರೆದಿರಬಹುದು ಎಂದು ಕುತೂಹಲ ಉಂಟಾಯಿತು ಹತ್ತಿರ ಹೋಗಿ ನೋಡಿದರೆ ಅದರಲ್ಲಿ ಬರೆದಿತ್ತು-
ಈ ರಸ್ತೆಯಲ್ಲೆಲ್ಲೊ ಐವತ್ತು ರುಪಾಯಿಯನ್ನು ಕಳೆದುಕೊಂಡಿದ್ದೇನೆ ನಿಮಗೆ ಯಾರಿಗಾದರೂ ಸಿಕ್ಕರೆ, ಈ ವಿಳಾಸದಲ್ಲಿರುವ ನನಗೆ ತಲುಪಿಸಿ. ನನ್ನ ಕಣ್ಣಿನ ದ್ರಷ್ಟಿ ತುಸು ಮಂಜಾಗಿದೆ ದಯವಿಟ್ಟು ಸಹಾಯ ಮಾಡಿ.

ನಾನು ಆವಿಳಾಸವನ್ನು ಗಮನಿಸಿದೆ ಅಲ್ಲಿರುವ ವ್ಯಕ್ತಿಯನ್ನು ನೋಡಬೇಕು ಎಂದು ಬಲವಾಗಿ ಅನಿಸಿತು. ಆವಿಳಾಸದ ಬಳಿ ಹೋದಾಗ ಗುಡಿಸಲಿನಂತ ಮನೆಯ ಮುಂದೆ ಮುದುಕಿಯೊಬ್ಬಳು ಕುಳಿತಿದ್ದಳು. ಆಕೆ ಬಸವಳಿದಿದ್ದಳು ನಾನು ಬರುತ್ತಿರುವ ಸದ್ದನ್ನು ಕೇಳಿ ಯಾರು? ಎಂದಳು ನಾನು ಅಜ್ಜಿ ,ಈ ದಾರಿಯಲ್ಲಿ ಬರುವಾಗ ಐವತ್ತು ರೂಪಾಯಿ ಸಿಕ್ಕಿತು. ಕರೆಂಟ್ ಕಂಬದ ಮೇಲೆ ಬರೆದ ಬೋರ್ಡ್ ನೋಡಿದೆ. ನಿಮಗೆ ಕೊಟ್ಟು ಹೋಗೋಣ ಎಂದು ಬಂದೆ ಅಂದೆ.

ನನ್ನ ಮಾತು ಕೇಳಿ ಅವಳ ಕಣ್ಣು ತೇವವಾದವು. ಈಗಾಗಲೆ 40-50 ಮಂದಿ ಬಂದು ದಾರಿಯಲ್ಲಿ ತಮಗೆ ಐವತ್ತು ರೂಪಾಯಿ ಸಿಕ್ಕಿತೆಂದು ಕೊಟ್ಟು ಹೋಗಿದ್ದಾರೆ. ಆಷ್ಟಕ್ಕೂ ಆ ಕರೆಂಟ್ ಕಂಬದ ಮೇಲೆ ನಾನು ಬೋರ್ಡ್ ನೇತು ಹಾಕಿಲ್ಲ ನನಗೆ ಓದಲು ಬರೆಯಲು ಬರುವುದಿಲ್ಲ, ಎಂದಳು . ಪರವಾಗಿಲ್ಲ ಐವತ್ತು ರುಪಾಯಿ ಇಟ್ಟುಕೊಳ್ಳಿ ಎಂದೆ.

ನೀವು ಇಲ್ಲಿಂದ ಹೋಗುವಾಗ ಆ ಕಂಬದ ಮೇಲೆ ಬರೆದ  ಬೋರ್ಡ್ ತೆಗೆದುಹಾಕಿ ಎಂದು ನನ್ನನ್ನು ವಿನಂತಿಸಿದಳು. ಸೋಜಿಗವೆಂದರೆ ತನ್ನನ್ನು ನೋಡಲು ಬಂದವರಿಗೆಲ್ಲ  ಬೋರ್ಡ್ ಅನ್ನು ತೆಗೆದು ಹಾಕುವಂತೆ ಹೇಳುತ್ತಿದ್ದಳು. ಆದರೆ ಯಾರೂ ಹಾಗೆ ಮಾಡಿರಲಿಲ್ಲ
ನಾನು ವಾಪಸ್ ಬರುವಾಗ ಯೋಚಿಸಲಾರಂಬಿಸಿದೆ, ಕರೆಂಟ್ ಕಂಬದ ಮೇಲೆ ಯಾರು ಈ ಬೋರ್ಡ್ ತಗುಲಿ ಹಾಕಿರಬಹುದು... ತನ್ನನ್ನು ನೋಡಲು ಬಂದವರಿಗೆಲ್ಲ ಅದನ್ನು ತೆಗೆದು ಹಾಕಿ ಎಂದು ಹೇಳಿದರೂ ಯಾರೂ ತೆಗೆದು ಹಾಕಲಿಲ್ಲ...
ಯಾರೋ ಒಬ್ಬನಿಗೆ ಆ ಮುದುಕಿಗೆ ಸಹಾಯ ಮಾಡಬೇಕೇಂದು ಅನಿಸಿರಬೇಕು, ಆತ  ಬೋರ್ಡ್ ಅನ್ನು ಹಾಕಿರಬೇಕು...
ಒಬ್ಬರಿಗೆ ಸಹಾಯ ಮಾಡಬೇಕು ಅನಿಸಿದರೆ ಎಷ್ಟೋಂದು ದಾರಿಗಳಿವೆಯಲ್ಲ.

ಅಷ್ಟೊತ್ತಿಗೆ ಯಾರೋ ಕರೆದಂತಾಯಿತು. ಸಾರ್ ಈ ಅಡ್ರೆಸ್ ನಲ್ಲಿರುವ ವ್ಯಕ್ತಿಯನ್ನು ಬೇಟಿ ಮಾಡುವುದು ಹೇಗೆ? ಅಲ್ಲಿಗೆ ಹೋಗುವುದು ಹೇಗೆ? ನನಗೆ ದಾರಿಯಲ್ಲಿ ಐವತ್ತು ರೂಪಾಯಿ ಸಿಕ್ಕಿತು ಅವರಿಗೆ ತಲುಪಿಸಬೇಕಾಗಿದೆ ಎಂದು ದಾರಿಹೋಕನೊಬ್ಬ ಹೇಳಿದ

ನಾನು ಗದ್ಗದಿತನಾದೆ

ಮಾನವೀಯತೆಯ ಒರತೆ ಮಾತ್ರ ಎಂದಿಗೂ ಬತ್ತುವುದಿಲ್ಲ ಅದು ಎಲ್ಲಾದರೂ ಜಿನುಗುತ್ತಲೆ ಇರುತ್ತದೆ ಎಂಬ ಮಾತು ಎಷ್ಟು ಸತ್ಯ ಅಲ್ಲವೆ...

ನನಗೆ ಇದುವರೇಗೂ ಬಂದಂತಹ  ವಾಟ್ಸಪ್ ಸಂದೇಶಗಳಲ್ಲಿ  ಇದು ಅತ್ಯುತ್ತಮ ಮತ್ತು ಇದು ಮಾತ್ರ ...                                   

No comments:

Post a Comment

all time